Mark 6:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಹಾನನನ್ನು ಬಂಧಿಸಲು ತನ್ನ ಸೈನಿಕರಿಗೆ ಹೆರೋದನೇ ಆಜ್ಞಾಪಿಸಿದ್ದನು. ಅಂತೆಯೇ ಅವರು ಯೋಹಾನನನ್ನು ಸೆರೆಯಲ್ಲಿ ಹಾಕಿದ್ದರು. ಹೆರೋದನು ತನ್ನ ಪತ್ನಿಯಾಗಿ ಇಟ್ಟುಕೊಂಡಿದ್ದ ಹೆರೋದ್ಯಳ ನಿಮಿತ್ತ ಹೀಗೆ ಮಾಡಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಪತ್ನಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.
Kannada BSI Bible 2016
ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿತರಿಸಿ ಸೆರೆಯಲ್ಲಿ ಕಟ್ಟಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.
Kannada Bible (KNCL) BSI 2016
ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಯೋಹಾನನನ್ನು ಬಂಧಿಸಿ ಸೆರೆಮನೆಗೆ ಹಾಕಬೇಕೆಂದು ಹೆರೋದನು ತಾನೇ ಕಳುಹಿಸಿದ್ದನು. ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆ ಮಾಡಿಕೊಂಡದ್ದರಿಂದ ಅವನು ಹೀಗೆ ಮಾಡಿದ್ದನು.