Mark 6:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?
Kannada BSI Bible 2016
ಸಬ್ಬತ್‌ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
Kannada BSI JV (ಕನ್ನಡ ಸತ್ಯವೇದವು J.V. (BSI))
ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡುವದಕ್ಕೆ ಪ್ರಾರಂಭಿಸಿದನು. ಎಲ್ಲರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಮಾತುಗಳು ಎಲ್ಲಿಂದ ಬಂದಿದ್ದಾವು? ಇವನು ಪಡೆದಿರುವ ಈ ಜ್ಞಾನವೇನು? ಇವನ ಕೈಯಿಂದ ಇಂಥ ಮಹತ್ಕಾರ್ಯಗಳಾಗುವದೇನು?
Kannada Bible (KNCL) BSI 2016
ಸಬ್ಬತ್‍ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಬ್ಬತ್ ದಿನ ಬಂದಾಗ, ಯೇಸು ಸಭಾಮಂದಿರದಲ್ಲಿ ಬೋಧಿಸಲಾರಂಭಿಸಿದರು. ಅದನ್ನು ಕೇಳಿದ ಅನೇಕರು ವಿಸ್ಮಯಗೊಂಡು, “ಈತನು ಇವೆಲ್ಲವನ್ನು ಎಲ್ಲಿಂದ ಪಡೆದಿದ್ದಾನೆ? ಈತನ ಕೈಗಳಿಂದ ಇಂಥ ಅದ್ಭುತಕಾರ್ಯಗಳನ್ನು ಮಾಡುವ ಜ್ಞಾನವು ಈತನಿಗೆ ಎಲ್ಲಿಂದ ಬಂತು?