Mark 6:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆಕೆಗೆ ಸಾಧ್ಯವಾಗಲಿಲ್ಲ. ಹೆರೋದನು ಯೋಹಾನನನ್ನು ಕೊಲ್ಲಿಸಲು ಭಯಪಟ್ಟನು. ಯೋಹಾನನನ್ನು ಒಳ್ಳೆಯವನೆಂದೂ ಪವಿತ್ರನೆಂದೂ ಜನರೆಲ್ಲರು ನಂಬಿದ್ದಾರೆಂಬುದು ಹೆರೋದನಿಗೆ ತಿಳಿದಿತ್ತು. ಆದ್ದರಿಂದ ಹೆರೋದನು ಯೋಹಾನನನ್ನು ರಕ್ಷಿಸಿದನು. ಹೆರೋದನು ಯೋಹಾನನ ಉಪದೇಶವನ್ನು ಕೇಳಿದಾಗಲೆಲ್ಲಾ ಗಲಿಬಿಲಿಗೊಳ್ಳುತ್ತಿದ್ದನು. ಆದರೂ ಅವನ ಉಪದೇಶವನ್ನು ಸಂತೋಷದಿಂದ ಕೇಳುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
Kannada BSI Bible 2016
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
Kannada Bible (KNCL) BSI 2016
ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.