Mark 6:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಮ್ಮೆ ಯೋಹಾನನನ್ನು ಮರಣಕ್ಕೆ ಈಡುಮಾಡುವ ಸುಸಮಯ ಹೆರೋದ್ಯಳಿಗೆ ದೊರೆಯಿತು. ಅಂದು ಹೆರೋದನ ಹುಟ್ಟುಹಬ್ಬದ ದಿನವಾಗಿತ್ತು. ಹೆರೋದನು ರಾಜಾಧಿಕಾರಿಗಳಿಗೂ ಸೇನಾಧಿಪತಿಗಳಿಗೂ ಮತ್ತು ಗಲಿಲಾಯದ ಪ್ರಮುಖರಿಗೂ ಒಂದು ಔತಣಕೂಟವನ್ನು ಏರ್ಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,
Kannada BSI Bible 2016
ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಅವಳಿಗೆ ಅನುಕೂಲವಾದ ದಿವಸ ಬಂತು; ಹೇಗಂದರೆ ಹೆರೋದನು ತಾನು ಹುಟ್ಟಿದ ದಿವಸದಲ್ಲಿ ಪ್ರಭುಗಳಿಗೂ ಸಹಸ್ರಾಧಿಪತಿಗಳಿಗೂ ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಮಾಡಿಸಿದಾಗ
Kannada Bible (KNCL) BSI 2016
ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊನೆಗೆ ಅನುಕೂಲವಾದ ಸಮಯ ಸಿಕ್ಕಿತು. ತನ್ನ ಜನ್ಮ ದಿನದಂದು ಹೆರೋದನು ತನ್ನ ಉನ್ನತ ಅಧಿಕಾರಿಗಳಿಗೆ, ಸೇನಾಧಿಪತಿಗಳಿಗೆ ಹಾಗೂ ಗಲಿಲಾಯದ ಪ್ರಮುಖರಿಗೆ ಔತಣವನ್ನು ಏರ್ಪಡಿಸಿದನು.