Mark 6:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆರೋದ್ಯಳ ಮಗಳು ಈ ಔತಣಕೂಟಕ್ಕೆ ಬಂದು ನರ್ತಿಸಿದಳು. ಹೆರೋದನಿಗೂ ಮತ್ತು ಅವನ ಜೊತೆಯಲ್ಲಿ ಊಟಮಾಡುತ್ತಿದ್ದವರಿಗೂ ಬಹಳ ಸಂತೋಷವಾಯಿತು. ಆಗ ರಾಜ ಹೆರೋದನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳಿಕೊ, ನಾನು ನಿನಗೆ ಕೊಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.
Kannada BSI Bible 2016
ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಙ್ತಿಯಲ್ಲಿ ಊಟಕ್ಕೆ ಕೂತಿದ್ದವರನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ - ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.
Kannada Bible (KNCL) BSI 2016
ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆರೋದ್ಯಳ ಮಗಳು ಒಳಗೆ ಬಂದು ನೃತ್ಯ ಮಾಡಿ, ಹೆರೋದನನ್ನೂ ಊಟಕ್ಕೆ ಬಂದ ಅವನ ಅತಿಥಿಗಳನ್ನೂ ಸಂತೋಷಪಡಿಸಿದಳು. ರಾಜನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳು, ನಾನು ಕೊಡುತ್ತೇನೆ,” ಎಂದು ಹೇಳಿ,