Mark 6:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹುಡುಗಿಯು ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನ್ನನ್ನು ಕೇಳಿಕೊಳ್ಳಲಿ?” ಎಂದು ಕೇಳಿದಳು. ಅವಳ ತಾಯಿ, “ಸ್ನಾನಿಕ ಯೋಹಾನನ ತಲೆಯನ್ನು ಕೇಳಿಕೊ” ಎಂದು ಹೇಳಿಕೊಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.
Kannada BSI Bible 2016
ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವಳು ಹೊರಕ್ಕೆ ಹೋಗಿ - ನಾನು ಏನು ಕೇಳಿಕೊಳ್ಳಲಿ? ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು - ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
Kannada Bible (KNCL) BSI 2016
ಅವಳು ತನ್ನ ತಾಯಿಯ ಬಳಿಗೆ ಹೋಗಿ, “ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?” ಎಂದು ವಿಚಾರಿಸಿದಳು. “ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು,” ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆ ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನನ್ನು ಕೇಳಲಿ?” ಎಂದು ಕೇಳಲು, ಆಕೆಯು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳು,” ಎಂದು ಉತ್ತರಕೊಟ್ಟಳು.