Mark 6:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಹುಡುಗಿ ಬೇಗನೆ ರಾಜನ ಬಳಿಗೆ ಬಂದು, “ಸ್ನಾನಿಕ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ಈಗಲೇ ತರಿಸಿಕೊಡಿ, ಇದೇ ನನ್ನ ಬೇಡಿಕೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು.
Kannada BSI Bible 2016
ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು - ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕೆಂದೇ ನನ್ನ ಕೋರಿಕೆ ಎಂದು ಅರಿಕೆ ಮಾಡಿಕೊಂಡಳು.
Kannada Bible (KNCL) BSI 2016
ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಆ ಹುಡುಗಿ ಅವಸರವಾಗಿ ರಾಜನ ಮುಂದೆ ಬಂದು, “ನನಗೆ ಈಗಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿ ಕೊಡಬೇಕು,” ಎಂದು ಕೇಳಿಕೊಂಡಳು.