Mark 6:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜ ಹೆರೋದನು ಬಹಳ ವ್ಯಸನಗೊಂಡನು. ಆದರೆ ಅವನು ಆ ಹುಡುಗಿಗೆ ಏನು ಬೇಕಾದರೂ ಕೊಡುವೆನೆಂದು ಪ್ರಮಾಣ ಮಾಡಿದ್ದನು. ಅಲ್ಲಿ ಹೆರೋದನ ಸಂಗಡ ಊಟಮಾಡುತ್ತಿದ್ದ ಜನರು ಆ ಪ್ರಮಾಣವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ನಿರಾಕರಿಸಲು ಹೆರೋದನು ಇಚ್ಛಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
Kannada BSI Bible 2016
ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅರಸನು ಬಹು ದುಃಖಪಟ್ಟರೂ ತಾನು ಇಟ್ಟುಕೊಂಡ ಆಣೆಗಳ ನಿವಿುತ್ತವಾಗಿಯೂ ತನ್ನ ಪಂಙ್ತಿಯಲ್ಲಿ ಕೂತಿದ್ದವರ ನಿವಿುತ್ತವಾಗಿಯೂ ಅವಳನ್ನು ಅಸಡ್ಡೆ ಮಾಡುವದಕ್ಕೆ ಮನಸ್ಸಿಲ್ಲದೆ
Kannada Bible (KNCL) BSI 2016
ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರಿಂದ ಅರಸನಿಗೆ ಬಹಳ ದುಃಖವಾದರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಆಕೆಯ ಕೋರಿಕೆಯನ್ನು ನಿರಾಕರಿಸಲಿಲ್ಲ.