Mark 6:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.
Kannada BSI Bible 2016
ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಆ ಬಡಗಿಯಲ್ಲವೇ. ಇವನು ಮರಿಯಳ ಮಗನಲ್ಲವೇ. ಯಾಕೋಬ ಯೋಸೆ ಯೂದ ಸೀಮೋನ ಇವರ ಅಣ್ಣನಲ್ಲವೇ. ಇವನ ತಂಗಿಯರು ಇಲ್ಲಿ ನಮ್ಮಲ್ಲಿ ಇದ್ದಾರಲ್ಲವೇ ಎಂದು ಮಾತಾಡಿಕೊಂಡು ಆತನ ವಿಷಯವಾಗಿ ಬೇಸರಗೊಂಡರು.
Kannada Bible (KNCL) BSI 2016
ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು.