Mark 6:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಉಪದೇಶಿಸಲು ಕಳುಹಿಸಿದ್ದ ಅಪೊಸ್ತಲರು ಮರಳಿಬಂದು ತಾವು ಮಾಡಿದ ಮತ್ತು ಉಪದೇಶಿಸಿದ ಸಂಗತಿಗಳನ್ನೆಲ್ಲ ಆತನಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.
Kannada BSI Bible 2016
ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇತ್ತಲಾಗಿ ಅಪೊಸ್ತಲರು ಆತನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಎಲ್ಲಾ ಆತನಿಗೆ ತಿಳಿಸಲು ಆತನು ಅವರಿಗೆ -
Kannada Bible (KNCL) BSI 2016
ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪೊಸ್ತಲರು ಹಿಂದಿರುಗಿ ಯೇಸುವಿನ ಬಳಿಗೆ ಬಂದು ತಾವು ಮಾಡಿದ್ದನ್ನೂ ಬೋಧಿಸಿದ ಎಲ್ಲವನ್ನೂ ಕುರಿತು ಅವರಿಗೆ ವರದಿಮಾಡಿದರು.