Mark 6:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತು ಆತನ ಶಿಷ್ಯರು ಜನರಿಂದ ತುಂಬಿದ ಸ್ಥಳದಲ್ಲಿದ್ದರು. ಅಲ್ಲಿ ಅನೇಕಾನೇಕ ಜನರಿದ್ದುದರಿಂದ ಯೇಸು ಮತ್ತು ಆತನ ಶಿಷ್ಯರಿಗೆ ಊಟಮಾಡಲು ಸಹ ಸಮಯವಿರಲಿಲ್ಲ. ಯೇಸು ತನ್ನ ಶಿಷ್ಯರಿಗೆ, “ನನ್ನೊಂದಿಗೆ ಬನ್ನಿ. ನಾವು ಪ್ರಶಾಂತವಾಗಿರುವ ಸ್ಥಳಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಳ್ಳೋಣ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.
Kannada BSI Bible 2016
ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮಾತ್ರ ವಿಂಗಡವಾಗಿ ಅಡವಿಗೆ ಬಂದು ಸ್ವಲ್ಪ ದಣುವಾರಿಸಿಕೊಳ್ಳಿರಿ ಎಂದು ಹೇಳಿದನು. ಯಾಕಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದದರಿಂದ ಅವರಿಗೆ ಊಟಮಾಡುವದಕ್ಕೂ ಅವಕಾಶ ಸಿಕ್ಕಲಿಲ್ಲ.
Kannada Bible (KNCL) BSI 2016
ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹಳ ಜನರು ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. ಯೇಸು ಅವರಿಗೆ, “ನೀವು ಏಕಾಂತವಾದ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ,” ಎಂದು ಹೇಳಿದರು.