Mark 6:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅವರು ಹೋಗುತ್ತಿರುವುದನ್ನು ಅನೇಕ ಜನರು ನೋಡಿದರು. ಆತನು ಯೇಸುವೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಆತನು ಹೋಗುತ್ತಿರುವ ಸ್ಥಳಕ್ಕೆ ಎಲ್ಲಾ ಊರುಗಳಿಂದ ಜನರು ಓಡಿಹೋಗಿ, ಆತನು ಅಲ್ಲಿಗೆ ಬರುವುದಕ್ಕೆ ಮುಂಚೆಯೇ ಅಲ್ಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.
Kannada BSI Bible 2016
ಅವರು ಹೊರಡುವದನ್ನು ಜನರು ನೋಡಿ ಅನೇಕರು ಆತನ ಗುರುತು ಹಿಡಿದು ಎಲ್ಲಾ ಪಟ್ಟಣಗಳಿಂದ ಕಾಲುನಡಿಗೆಯಾಗಿ ಅಲ್ಲಿಗೆ ಓಡುತ್ತಾ ಅವರಿಗಿಂತಲೂ ಮುಂದಾಗಿ ಆತನ ಬಳಿಗೆ ಸೇರಿಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೋಗುವದನ್ನು ಬಹು ಜನರು ಕಂಡು ಅವರ ಗುರುತನ್ನು ಹಿಡಿದು ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮುಂಚೆ ಅಲ್ಲಿ ಸೇರಿದರು.
Kannada Bible (KNCL) BSI 2016
ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ಹೋಗುವುದನ್ನು ಕಂಡ ಅನೇಕರು ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ಓಡಿ ಅವರಿಗಿಂತ ಮುಂಚೆ ಅಲ್ಲಿ ಸೇರಿದ್ದರು.