Mark 6:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
Kannada BSI Bible 2016
ಯೇಸು ಹೊರಗೆ ಬಂದು ಬಹು ಜನರನ್ನು ನೋಡಿ ಅವರ ಮೇಲೆ ಕನಿಕರ ಪಟ್ಟನು; ಅವರು ಕುರುಬನಿಲ್ಲದ ಕುರಿಗಳಂತೆ ಇದ್ದರು; ಆತನು ಅವರಿಗೆ ಅನೇಕ ವಿಷಯಗಳನ್ನು ಬೋಧಿಸಲಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಹೊರಗೆ ಬಂದು ಬಹುಜನರ ಗುಂಪನ್ನು ಕಂಡು ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಬಹಳ ಉಪದೇಶ ಮಾಡುತ್ತಿದ್ದನು.
Kannada Bible (KNCL) BSI 2016
ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.