Mark 6:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಜನರನ್ನು ಕಳುಹಿಸಿಬಿಡು. ಅವರು ಸುತ್ತಮುತ್ತಲಿರುವ ತೋಟಗಳಿಗೂ ಪಟ್ಟಣಗಳಿಗೂ ಹೋಗಿ ಆಹಾರವನ್ನು ಕೊಂಡುಕೊಳ್ಳಲಿ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ” ಎಂದು ಹೇಳಿದರು.
Kannada BSI Bible 2016
ಇವರು ಸುತ್ತ ಲಿನ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮಗೋಸ್ಕರ ರೊಟ್ಟಿಯನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿ ಬಿಡು; ಯಾಕಂದರೆ ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಅಡವಿ, ಈಗ ಹೊತ್ತು ಬಹಳವಾಯಿತು; ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ ಅಂದದ್ದಕ್ಕೆ ಯೇಸು -
Kannada Bible (KNCL) BSI 2016
“ಈಗಾಗಲೇ ಹೊತ್ತು ಮೀರಿಹೋಯಿತು; ಇದು ನಿರ್ಜನಪ್ರದೇಶ; ಇನ್ನು ಜನರನ್ನು ಕಳುಹಿಸಿಬಿಡಿ. ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟಕ್ಕೇ ಏನಾದರೂ ಕೊಂಡುಕೊಳ್ಳಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಜನರು ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ತಿನ್ನುವುದಕ್ಕಾಗಿ ಏನಾದರೂ ಕೊಂಡುಕೊಳ್ಳುವಂತೆ ಇವರನ್ನು ಕಳುಹಿಸಿಬಿಡು,” ಎಂದು ಹೇಳಿದರು.