Mark 6:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೇಸು, “ನೀವೇ ಅವರಿಗೆ ಊಟ ಕೊಡಿ” ಎಂದು ಉತ್ತರಕೊಟ್ಟನು. ಶಿಷ್ಯರು ಯೇಸುವಿಗೆ, “ಈ ಜನರಿಗೆಲ್ಲ ಬೇಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರೋಣ!? ಅವರಿಗೆ ಬೇಕಾಗುವಷ್ಟು ರೊಟ್ಟಿಯನ್ನು ಕೊಂಡುಕೊಂಡು ಬರಬೇಕಾದರೆ ನಮಗೆ ಇನ್ನೂರು ದಿನಾರಿ ನಾಣ್ಯ ಗಳಾದರೂ ಬೇಕು!” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು
Kannada BSI Bible 2016
ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್‌ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೇ ಅವರಿಗೆ ಊಟಕ್ಕೆ ಕೊಡಿರಿ ಎಂದು ಉತ್ತರಕೊಟ್ಟನು. ಅದಕ್ಕವರು - ನಾವು ಹೋಗಿ ಇನ್ನೂರು ಹಣಕ್ಕೆ ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟಕ್ಕೆ ಕೊಡಬೇಕೋ? ಎಂದು ಕೇಳಲು ಆತನು -
Kannada Bible (KNCL) BSI 2016
ಆಗ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿ,” ಎಂದರು. ಅದಕ್ಕೆ ಶಿಷ್ಯರು, “ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುತಂದು ಅವರಿಗೆ ಊಟಕ್ಕೆ ಬಡಿಸೋಣವೇನು?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಶಿಷ್ಯರು, “ನಾವು ಹೋಗಿ ಅವರಿಗೆ ಊಟಕ್ಕಾಗಿ ಆರು ತಿಂಗಳ ಸಂಬಳದಷ್ಟು ಖರ್ಚುಮಾಡಿ, ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದು ಕೇಳಿದರು.