Mark 6:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಶಿಷ್ಯರಿಗೆ, “ಈಗ ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಎಂದು ಹೇಳಿದನು. ಶಿಷ್ಯರು ಹೋಗಿ ರೊಟ್ಟಿಗಳನ್ನು ಎಣಿಸಿ ಬಂದು, “ನಮ್ಮ ಬಳಿ ಐದು ರೊಟ್ಟಿಗಳಿವೆ ಮತ್ತು ಎರಡು ಮೀನುಗಳಿವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು.
Kannada BSI Bible 2016
ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡು--ಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿಕೊಂಡು ಬನ್ನಿ ಅಂದನು. ಅವರು ತಿಳುಕೊಂಡು ಬಂದು - ಐದು ರೊಟ್ಟಿ ಎರಡು ಮೀನು ಅಂದರು.
Kannada Bible (KNCL) BSI 2016
ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿಕೊಂಡು ಬನ್ನಿ,” ಎಂದರು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,” ಎಂದು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ,” ಎಂದು ಕೇಳಿದರು. ಅವರು ವಿಚಾರಿಸಿ, “ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,” ಎಂದು ಉತ್ತರಕೊಟ್ಟರು.