Mark 6:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ಪ್ರವಾದಿಯನ್ನು ಬೇರೆ ಜನರು ಗೌರವಿಸುತ್ತಾರೆ, ಆದರೆ ಪ್ರವಾದಿಗೆ ಸ್ವಂತ ಊರಿನಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ದೊರೆಯುವುದಿಲ್ಲ” ಎಂದು ಜನರಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು.
Kannada BSI Bible 2016
ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಮಾತ್ರ ಮರ್ಯಾದೆಯಿಲ್ಲ ಎಂದು ಹೇಳಿದನು.
Kannada Bible (KNCL) BSI 2016
ಆಗ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ, ತನ್ನ ಸಂಬಂಧಿಕರ ನಡುವೆ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.