Mark 6:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.
Kannada BSI Bible 2016
ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು - ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟು ಆ ಎರಡು ಮೀನುಗಳನ್ನೂ ಎಲ್ಲರಿಗೆ ಹಂಚಿಸಿದನು.
Kannada Bible (KNCL) BSI 2016
ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಆ ರೊಟ್ಟಿಗಳನ್ನು ಮುರಿದು ಜನರಿಗೆ ಬಡಿಸುವಂತೆ ಅವನ್ನು ಶಿಷ್ಯರಿಗೆ ಕೊಟ್ಟರು. ಅಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚುವಂತೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅದರಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚಿಸಿದರು.