Mark 6:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.
Kannada BSI Bible 2016
ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.
Kannada Bible (KNCL) BSI 2016
ಇದಾದ ಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಬೇತ್ಸಾಯಿದಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.