Mark 6:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
Kannada BSI Bible 2016
ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎದುರು ಗಾಳಿ ಬೀಸುತ್ತಿದ್ದದರಿಂದ ಶಿಷ್ಯರು ಹುಟ್ಟು ಹಾಕಿ ಹಾಕಿ ಒದ್ದಾಡುವದನ್ನು ಆತನು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
Kannada Bible (KNCL) BSI 2016
ಎದುರುಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಹಾಕಿ ದಣಿದುಹೋಗಿದ್ದರು. ಇದನ್ನು ಕಂಡ ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಕಡೆಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದರಲ್ಲಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎದುರುಗಾಳಿ ಬಲವಾಗಿ ಬೀಸುತ್ತಿದ್ದುದರಿಂದ ಶಿಷ್ಯರು ದೋಣಿಯನ್ನು ನಿಯಂತ್ರಿಸಲು ದಣಿದು ಹೋದದ್ದನ್ನು ಯೇಸು ಕಂಡು, ಮುಂಜಾನೆ ಸುಮಾರು ಮೂರು ಗಂಟೆಯಲ್ಲಿ ಅವರ ಬಳಿಗೆ ಸರೋವರದ ಮೇಲೆ ನಡೆಯುತ್ತಾ ಬಂದರು. ಯೇಸು ಅವರನ್ನು ದಾಟಿ ಹೋಗುವುದರಲ್ಲಿದ್ದರು.