Mark 6:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.
Kannada BSI Bible 2016
ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದ್ದೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
Kannada Bible (KNCL) BSI 2016
ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಯೇಸು ಕೆಲವು ರೋಗಿಗಳ ಮೇಲೆ ಕೈಗಳನ್ನಿಟ್ಟು ಅವರನ್ನು ಗುಣಪಡಿಸಿದ್ದಲ್ಲದೆ ಬೇರೆ ಯಾವ ಅದ್ಭುತಗಳನ್ನೂ ಮಾಡಲಿಲ್ಲ.