Mark 6:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶಿಷ್ಯರೆಲ್ಲರೂ ಯೇಸುವನ್ನು ನೋಡಿ ಬಹಳವಾಗಿ ಹೆದರಿದ್ದರು. ಆದರೆ ಯೇಸು ಅವರೊಂದಿಗೆ ಮಾತನಾಡಿ, “ಚಿಂತಿಸದಿರಿ! ನಾನೇ! ಅಂಜಬೇಡಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು.
Kannada BSI Bible 2016
ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಕೂಡಲೆ ಅವರನ್ನು ಮಾತಾಡಿಸಿ ಅವರಿಗೆ - ಧೈರ್ಯವಾಗಿರಿ; ನಾನು; ಅಂಜಬೇಡಿರಿ ಎಂದು ಹೇಳಿದನು.
Kannada Bible (KNCL) BSI 2016
ತಕ್ಷಣವೇ ಯೇಸು ಅವರೊಡನೆ ಮಾತನಾಡುತ್ತಾ, “ಭಯಪಡಬೇಡಿ, ಬೇರೆ ಯಾರೂ ಅಲ್ಲ, ನಾನೇ; ಧೈರ್ಯದಿಂದಿರಿ,” ಎಂದು ಅವರೊಡನೆ ಮಾತಾಡಿ ದೋಣಿಯನ್ನು ಹತ್ತಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರೂ ಯೇಸುವನ್ನು ಕಂಡು ದಿಗಿಲುಗೊಂಡಿದ್ದರು. ಕೂಡಲೇ ಯೇಸು ಅವರಿಗೆ, “ಧೈರ್ಯವಾಗಿರಿ, ನಾನೇ! ಭಯಪಡಬೇಡಿರಿ,” ಎಂದರು.