Mark 6:55 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಬಂದಿರುವ ಸುದ್ದಿಯನ್ನು ಆ ಪ್ರದೇಶದಲ್ಲಿರುವ ಜನರಿಗೆಲ್ಲಾ ತಿಳಿಸುವುದಕ್ಕಾಗಿ ಅವರು ಓಡಿಹೋದರು. ಯೇಸು ಹೋದ ಸ್ಥಳಗಳಿಗೆಲ್ಲ ಜನರು ಕಾಯಿಲೆಯ ಜನರನ್ನು ಹಾಸಿಗೆಗಳ ಮೇಲೆ ತಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು.
Kannada BSI Bible 2016
ಸುತ್ತಲಿನ ಸೀಮೆಯಲ್ಲೆಲ್ಲಾ ಓಡಾಡಿ ಆತನು ಎಲ್ಲಿದ್ದಾನೆಂದು ಕೇಳಿ ಇದ್ದಲ್ಲಿಗೆ ಅಸ್ವಸ್ಥತೆಯುಳ್ಳವರನ್ನು ಹಾಸಿಗೆಗಳೊಂದಿಗೆ ಎತ್ತಿಕೊಂಡು ಹೋಗಲಾರಂಭಿಸಿದರು.ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೀಮೆಯಲ್ಲೆಲ್ಲಾ ಓಡಾಡುತ್ತಾ ಮೈಯಲ್ಲಿ ನೆಟ್ಟಗಿಲ್ಲದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲೆಲ್ಲಿ ಇದ್ದಾನೆಂದು ಕೇಳಿದರೋ ಅಲ್ಲಲ್ಲಿಗೆ ತೆಗೆದುಕೊಂಡು ಹೋದರು.
Kannada Bible (KNCL) BSI 2016
ಯೇಸು ಹಳ್ಳಿಗಳಿಗಾಗಲಿ, ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆತರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಆ ಪ್ರದೇಶದಲ್ಲೆಲ್ಲಾ ಓಡಾಡಿ, ಕಾಯಿಲೆಯಾಗಿದ್ದವರನ್ನು ಚಾಪೆಗಳ ಮೇಲೆ ಹಾಕಿಕೊಂಡು ಯೇಸು ಎಲ್ಲಿದ್ದಾರೆಂದು ಕೇಳಿದರೋ ಅಲ್ಲಿಗೆ ಬರಲಾರಂಭಿಸಿದರು.