Mark 6:56 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಆ ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
Kannada BSI Bible 2016
ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಯಾವ ಗ್ರಾಮಗಳಿಗೂ ಯಾವ ಊರು ಹಳ್ಳಿಗಳಿಗೂ ಹೋದನೋ ಅಲ್ಲಿಯವರು ರೋಗಿಗಳನ್ನು ಪೇಟೆಗಳಲ್ಲಿ ಇಟ್ಟು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.
Kannada Bible (KNCL) BSI 2016
ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಹಳ್ಳಿ, ಪಟ್ಟಣ ಊರುಗಳಲ್ಲಿ ಎಲ್ಲೆಲ್ಲಿ ಹೋದರೋ ಅಲ್ಲಿ ಜನರು ರೋಗಿಗಳನ್ನು ತಂದು ಪೇಟೆಗಳಲ್ಲಿ ಇಟ್ಟು, ಯೇಸುವಿನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.