Mark 6:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಾಗಿ ಕರೆದು ಅವರನ್ನು ಇಬ್ಬರಿಬ್ಬರಾಗಿ ಹೊರಗೆ ಕಳುಹಿಸಿದನು. ಯೇಸು ಅವರಿಗೆ ದೆವ್ವಗಳ ಮೇಲೆ ಅಧಿಕಾರವನ್ನು ನೀಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,
Kannada BSI Bible 2016
ಆತನು ಹನ್ನೆರಡು ಮಂದಿಯನ್ನು ತನ್ನ ಬಳಿಗೆ ಕರೆದು ಅವರಿಗೆ ಅಶುದ್ಧಾತ್ಮಗಳ ಮೇಲೆ ಅಧಿಕಾರ ಕೊಟ್ಟು ಇಬ್ಬಿಬ್ಬರನ್ನು ಕಳುಹಿಸಲಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಹಳ್ಳಿಪಳ್ಳಿಗಳನ್ನು ಸುತ್ತಿಕೊಂಡು ಉಪದೇಶ ಮಾಡುತ್ತಾ ಬಂದನು. ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬರಿಬ್ಬರಾಗಿ ಕಳುಹಿಸಲಾರಂಭಿಸಿದನು. ಕಳುಹಿಸುವಾಗ ಅವರಿಗೆ ದೆವ್ವಗಳ ಮೇಲೆ ಅಧಿಕಾರಕೊಟ್ಟು -
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಕರೆದು, ಅವರಿಗೆ ಅಶುದ್ಧಾತ್ಮಗಳನ್ನು ಹೊರಗಟ್ಟುವ ಅಧಿಕಾರವನ್ನು ಕೊಟ್ಟು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.