Mark 7:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಹೇಳುವುದೇನೆಂದರೆ, ಒಬ್ಬನು ತನ್ನ ತಂದೆತಾಯಿಗಳಿಗೆ, ‘ನಿಮ್ಮ ಸಹಾಯಕ್ಕಾಗಿ ನಾನು ಕೊಡತಕ್ಕದ್ದನ್ನೆಲ್ಲ ದೇವರಿಗೆ ಅರ್ಪಿಸಿದ್ದೇನೆ ಎಂದು ಹೇಳಬಹುದು’ ಎಂದು ಬೋಧಿಸಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ
Kannada BSI Bible 2016
ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್‌ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೋ ಒಬ್ಬನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ನೋಡಿ - ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ ಮಾಡಿದ್ದೇನೆ (ಅಂದರೆ ದೇವರಿಗಾಗಿ ಇಟ್ಟಿದ್ದೇನೆ) ಎಂದು ಹೇಳುವದಾದರೆ
Kannada Bible (KNCL) BSI 2016
ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿಬಿಟ್ಟರೆ ಸಾಕು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕಾಣಿಕೆಯಾಗಿ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ,