Mark 7:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು ದೇವರ ಆಜ್ಞೆಯನ್ನು ಅನುಸರಿಸುವುದಕ್ಕಿಂತಲೂ ನಿಮ್ಮ ಸಂಪ್ರದಾಯಗಳನ್ನು ಅನುಸರಿಸುವುದೇ ಬಹಳ ಮುಖ್ಯವೆಂದು ನೀವು ಬೋಧಿಸಿದಂತಾಯಿತು. ಇಂಥ ಅನೇಕ ಕಾರ್ಯಗಳನ್ನು ನೀವು ಮಾಡುತ್ತೀರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.
Kannada BSI Bible 2016
ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ ಎಂದು ಹೇಳಿದನು.
Kannada Bible (KNCL) BSI 2016
“ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನೀವು ಮಾಡುತ್ತಾ ಬಂದಿರುವ ಸಂಪ್ರದಾಯಗಳ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ,” ಎಂದು ಹೇಳಿದರು.