Mark 7:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ವ್ಯಕ್ತಿಯ ಅಂತರಂಗದೊಳಕ್ಕೆ ಹೋಗಿ ಅವನನ್ನು ಅಶುದ್ಧನನ್ನಾಗಿ ಮಾಡುವಂಥದ್ದು ಯಾವುದೂ ಇಲ್ಲ. ಒಬ್ಬ ವ್ಯಕ್ತಿಯ ಒಳಗಿಂದ ಬಂದ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.
Kannada BSI Bible 2016
ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊರಗಿನಿಂದ ಮನುಷ್ಯನೊಳಕ್ಕೆ ಹೋಗಿ ಅವನನ್ನು ಹೊಲೆಮಾಡತಕ್ಕಂಥದು ಒಂದೂ ಇಲ್ಲ; ಆದರೆ ಮನುಷ್ಯನೊಳಗಿಂದ ಹೊರಡುವವುಗಳೇ ಮನುಷ್ಯನನ್ನು ಹೊಲೆಮಾಡುವಂಥವುಗಳಾಗಿವೆ ಎಂದು ಹೇಳಿದನು.
Kannada Bible (KNCL) BSI 2016
“ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಅಶುದ್ಧ ಮಾಡುವುದಿಲ್ಲ. ಆದರೆ ಮನುಷ್ಯನೊಳಗಿಂದ ಹೊರಗೆ ಬರುವಂಥದ್ದು ಅವನನ್ನು ಅಶುದ್ಧ ಮಾಡುತ್ತದೆ.