Mark 7:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಹಾರವು ಒಬ್ಬ ಮನುಷ್ಯನ ಹೃದಯದೊಳಕ್ಕೆ ಹೋಗದೆ ಹೊಟ್ಟೆಯೊಳಕ್ಕೆ ಹೋಗುತ್ತದೆ. ಅನಂತರ ಅದು ಅಲ್ಲಿಂದ ಹೊರಬರುತ್ತದೆ” ಎಂದು ಹೇಳಿದನು. (ಹೀಗೆ ತಿನ್ನತಕ್ಕ ಯಾವ ಆಹಾರವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
Kannada BSI Bible 2016
ಯಾಕಂದರೆ ಅದು ಅವನ ಹೃದಯದೊಳಗೆ ಸೇರದೆ ಹೊಟ್ಟೆಯೊಳಗೆ ಸೇರಿ ಎಲ್ಲಾ ಆಹಾರ ಪದಾರ್ಥಗಳನ್ನು ಶುದ್ಧಮಾಡುತ್ತಾ ಬಹಿರ್ಭೂಮಿಗೆ ಹೋಗುತ್ತದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ ಬಹಿರ್ದೇಶಕ್ಕೆ ಹೋಗುವದರಿಂದ ಅವನನ್ನು ಹೊಲೆಮಾಡಲಾರದೆಂದು ನಿಮಗೆ ತಿಳಿಯಲಿಲ್ಲವೋ ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ತಿನ್ನುವ ಪದಾರ್ಥಗಳೆಲ್ಲಾ ಶುದ್ಧವೆಂದು ಸೂಚಿಸಿದನು.
Kannada Bible (KNCL) BSI 2016
ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅದು ಅವನ ಹೃದಯದೊಳಗೆ ಹೋಗದೆ ಹೊಟ್ಟೆಯನ್ನು ಸೇರಿ ಬಳಿಕ ವಿಸರ್ಜಿತವಾಗುತ್ತದೆ. ಹೀಗೆ ಹೇಳುವುದರ ಮೂಲಕ ಎಲ್ಲಾ ಆಹಾರ ಪದಾರ್ಥಗಳು ಶುದ್ಧವಾಗಿವೆ,” ಎಂದು ಯೇಸು ಸೂಚಿಸಿದರು.