Mark 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ಶಿಷ್ಯರಲ್ಲಿ ಕೆಲವರು ಕೈಗಳನ್ನು ತೊಳೆಯದೆ ಅಶುದ್ಧವಾದ ಕೈಗಳಿಂದ ಊಟ ಮಾಡುತ್ತಿರುವುದನ್ನು ಫರಿಸಾಯರು ಮತ್ತು ಧರ್ಮೋಪದೇಶಕರು ನೋಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.
Kannada BSI Bible 2016
ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಸಂಪ್ರದಾಯವನ್ನು ಹಿಡಿದು ತಮ್ಮ ಕೈಗಳನ್ನು ಚೆನ್ನಾಗಿ ತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಮತ್ತು ಪೇಟೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಇದಲ್ಲದೆ ಅವರಲ್ಲಿ ತಂಬಿಗೆ ಬಟ್ಟಲು ತಪ್ಪಲೆಗಳನ್ನು ಬೆಳಗಿ ತೊಳೆಯುವದೇ ಮೊದಲಾದ ಅನೇಕಾಚಾರಗಳನ್ನು ನಡಿಸುವ ನೇಮಕವುಂಟು. ಆತನ ಶಿಷ್ಯರಲ್ಲಿ ಕೆಲವರು ಮೈಲಿಗೆಯ ಕೈಯಿಂದ, ಅಂದರೆ ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದನ್ನು ಆ ಫರಿಸಾಯರೂ ಶಾಸ್ತ್ರಿಗಳೂ ಕಂಡು
Kannada Bible (KNCL) BSI 2016
ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಅಂದರೆ ಆಚಾರ ಪದ್ಧತಿಯಂತೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.