Mark 7:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಯೇಸು ಅಲ್ಲಿ ಒಂದು ಮನೆಯೊಳಕ್ಕೆ ಹೋದನು. ತಾನು ಅಲ್ಲಿರುವುದು ಅಲ್ಲಿಯ ಜನರಿಗೆ ತಿಳಿಯಬಾರದೆಂಬುದು ಆತನ ಅಪೇಕ್ಷೆಯಾಗಿತ್ತು. ಆದರೆ ಯೇಸುವಿಗೆ ಅಡಗಿಕೊಳ್ಳಲಿಕ್ಕಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
Kannada BSI Bible 2016
ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಯೇಸು ಎದ್ದು ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳುಕೊಂಡು ಅದು ಯಾರಿಗೂ ಗೊತ್ತಾಗಬಾರದೆಂದಿದ್ದನು; ಆದರೆ ಆತನು ಗುಪ್ತವಾಗಿರುವದಕ್ಕೆ ಆಗದೆ ಹೋಯಿತು.
Kannada Bible (KNCL) BSI 2016
ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶಕ್ಕೆ ಹೋದರು. ಯೇಸು ಒಂದು ಮನೆಯೊಳಗೆ ಹೋದಾಗ, ಅದು ಯಾರಿಗೂ ತಿಳಿಯಬಾರದೆಂದು ಬಯಸಿದರು. ಆದರೂ ಅವರು ಗುಟ್ಟಾಗಿರಲು ಸಾಧ್ಯವಾಗಲಿಲ್ಲ.