Mark 7:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅಲ್ಲಿರುವನೆಂಬುದು ಒಬ್ಬ ಸ್ತ್ರೀಗೆ ತಿಳಿಯಿತು. ಅವಳ ಕಿರಿಯ ಮಗಳಿಗೆ ದೆವ್ವ ಹಿಡಿದಿತ್ತು. ಆದ್ದರಿಂದ ಆ ಸ್ತ್ರೀಯು ಯೇಸುವಿನ ಬಳಿಗೆ ಬಂದು, ಆತನ ಪಾದಗಳ ಮುಂದೆ ಅಡ್ಡಬಿದ್ದು ನಮಸ್ಕರಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.
Kannada BSI Bible 2016
ಯಾಕಂದರೆ ಒಬ್ಬ ಸ್ತ್ರೀಯು ಆತನ ವಿಷಯವಾಗಿ ಕೇಳಿ ಅಲ್ಲಿಗೆ ಬಂದು ಆತನ ಪಾದಗಳಿಗೆ ಬಿದ್ದಳು. ಯಾಕಂದರೆ ಆಕೆಯ ಮಗಳಿಗೆ ಅಶುದ್ಧಾತ್ಮ ಹಿಡಿದಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು.
Kannada Bible (KNCL) BSI 2016
ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಯೇಸುವಿನ ವಿಷಯ ತಿಳಿದ ಕೂಡಲೇ, ಅಶುದ್ಧಾತ್ಮಪೀಡಿತಳಾಗಿದ್ದ ಒಬ್ಬ ಚಿಕ್ಕ ಹುಡುಗಿಯ ತಾಯಿ ಬಂದು ಅವರ ಪಾದಕ್ಕೆ ಬಿದ್ದಳು.