Mark 7:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಆ ಸ್ತ್ರೀಗೆ, “ಮಕ್ಕಳಿಗೆ ಕೊಡುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ. ತಮಗೆ ಬೇಕಾದುದನ್ನು ಮಕ್ಕಳು ಮೊದಲು ತಿನ್ನಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.
Kannada BSI Bible 2016
ಆದರೆ ಯೇಸು ಆಕೆಗೆ--ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಯಾಕಂದರೆ ಮಕ್ಕಳ ರೊಟ್ಟಿ ಯನ್ನು ತೆಗೆದುಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ತನ್ನ ಮಗಳ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ ಆತನು ಆಕೆಗೆ - ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತಕ್ಕೊಂಡು ನಾಯಿಮರಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.
Kannada Bible (KNCL) BSI 2016
ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆಕೆಗೆ, “ಮೊದಲು ಮಕ್ಕಳು ತಮಗೆ ಬೇಕಾದದ್ದನ್ನು ತಿಂದು ತೃಪ್ತಿಗೊಳ್ಳಲಿ, ಏಕೆಂದರೆ ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದರು.