Mark 7:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯು, “ಅದು ನಿಜ ಪ್ರಭು. ಆದರೆ ಮಕ್ಕಳು ತಿನ್ನದೆ ಬಿಟ್ಟ ಆಹಾರದ ಚೂರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನಬಹುದಲ್ಲವೇ?” ಎಂದು ಉತ್ತರಕೊಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು
Kannada BSI Bible 2016
ಆಕೆಯು ಪ್ರತ್ಯುತ್ತರ ವಾಗಿ ಆತನಿಗೆ--ಹೌದು, ಕರ್ತನೇ; ಆದರೂ ಮೇಜಿನ ಕೆಳಗೆ ಮಕ್ಕಳ ರೊಟ್ಟಿಯ ತುಂಡುಗಳನ್ನು ನಾಯಿಗಳು ತಿನ್ನುತ್ತವೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆಕೆಯು - ಸ್ವಾಮೀ, ಆ ಮಾತು ನಿಜವೇ; ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ ಎಂದು ಉತ್ತರಕೊಡಲು
Kannada Bible (KNCL) BSI 2016
ಅದಕ್ಕೆ ಆಕೆ, “ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಆಕೆಯು ಯೇಸುವಿಗೆ, “ಹೌದು ಸ್ವಾಮೀ, ಆದರೆ ಮೇಜಿನ ಕೆಳಗಿರುವ ನಾಯಿಮರಿಗಳು ಮಕ್ಕಳ ಕೈಯಿಂದ ಕೆಳಗೆ ಬೀಳುವ ರೊಟ್ಟಿತುಂಡುಗಳನ್ನು ತಿನ್ನುತ್ತವಲ್ಲಾ?” ಎಂದು ಉತ್ತರಕೊಟ್ಟಳು.