Mark 7:3 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರಿಸಾಯರು ಮತ್ತು ಇತರ ಯೆಹೂದ್ಯರೆಲ್ಲರೂ ಸಂಪ್ರದಾಯದಂತೆ ಕೈಗಳನ್ನು ತೊಳೆಯದೆ ಊಟಮಾಡುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಆಚಾರಗಳನ್ನು ಅನುಸರಿಸುವುದಕ್ಕಾಗಿ ಅವರು ಹೀಗೆ ಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
Kannada BSI Bible 2016
ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.
Kannada Bible (KNCL) BSI 2016
ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರು ಮತ್ತು ಎಲ್ಲಾ ಯೆಹೂದ್ಯರು ಆಚಾರ ಪದ್ಧತಿಯಂತೆ ತಮ್ಮ ಕೈಗಳನ್ನು ಸ್ವಚ್ಛವಾಗಿ ತೊಳೆಯದೆ ಊಟಮಾಡುವುದಿಲ್ಲ. ಹೀಗೆ ಅವರ ಪೂರ್ವಿಕರಿಂದ ಬಂದ ಸಂಪ್ರದಾಯವನ್ನು ಪಾಲಿಸುತ್ತಿದ್ದರು.