Mark 7:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯು ಮನೆಗೆ ಹೋದಾಗ ತನ್ನ ಮಗಳು ಹಾಸಿಗೆಯಲ್ಲಿ ಮಲಗಿರುವುದನ್ನು ಕಂಡಳು. ದೆವ್ವವು ಅವಳನ್ನು ಬಿಟ್ಟುಹೋಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.
Kannada BSI Bible 2016
ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿ ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.
Kannada Bible (KNCL) BSI 2016
ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟುಹೋಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆ ಮನೆಗೆ ಹೋದಾಗ, ದೆವ್ವ ಅವಳ ಮಗಳನ್ನು ಬಿಟ್ಟುಹೋಗಿತ್ತು ಮತ್ತು ಮಗಳು ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡಳು.