Mark 7:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಅಲ್ಲಿದ್ದಾಗ, ಕೆಲವರು ಕಿವುಡನೂ ತೊದಲನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ಕರೆದುತಂದು ಅವನ ಮೇಲೆ ಕೈಯಿಟ್ಟು ಗುಣಪಡಿಸಬೇಕೆಂದು ಬೇಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.
Kannada BSI Bible 2016
ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಕೆಲವರು ತೊದಲು ಮಾತಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರತಂದು - ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.
Kannada Bible (KNCL) BSI 2016
ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು. ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಕೆಲವರು ಮಾತನಾಡಲಾಗದ ಒಬ್ಬ ಕಿವುಡನನ್ನು ಕರೆದುಕೊಂಡು ಬಂದು ಅವನ ಮೇಲೆ ಕೈಯಿಡಬೇಕೆಂದು ಯೇಸುವನ್ನು ಬೇಡಿಕೊಂಡರು.