Mark 7:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವನನ್ನು ಜನರಿಂದ ಸ್ವಲ್ಪ ದೂರ ತನ್ನೊಂದಿಗೆ ಕರೆದೊಯ್ದು ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,
Kannada BSI Bible 2016
ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವನನ್ನು ಜನರ ಗುಂಪಿನಿಂದ ಒತ್ತಟ್ಟಿಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟು ಉಗುಳಿ
Kannada Bible (KNCL) BSI 2016
ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ತಮ್ಮ ಬೆರಳುಗಳನ್ನು ಅವನ ಕಿವಿಯೊಳಗಿಟ್ಟು ಅನಂತರ ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದರು.