Mark 7:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವನ ಕಿವಿಗಳು ತೆರೆದವು. ನಾಲಿಗೆ ಸಡಿಲಗೊಂಡಿತು. ಅವನು ಸ್ಪಷ್ಟವಾಗಿ ಮಾತಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.
Kannada BSI Bible 2016
ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಳುತ್ತಲೇ ಅವನ ಕಿವಿ ತೆರೆದವು; ಅವನ ನಾಲಿಗೆಯ ಕಟ್ಟು ಬಿಚ್ಚಿಹೋಯಿತು; ಅವನು ನೆಟ್ಟಗೆ ಮಾತಾಡಿದನು.
Kannada Bible (KNCL) BSI 2016
ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು. ಅವನು ಸ್ಪಷ್ಟವಾಗಿ ಮಾತನಾಡಲಾರಂಭಿಸಿದನು.