Mark 7:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸಂಗತಿಯನ್ನು ತಿಳಿಸಕೂಡದೆಂದು ಯೇಸು ಜನರಿಗೆ ಆಜ್ಞಾಪಿಸಿದನು. ತನ್ನ ಬಗ್ಗೆ ಇತರ ಜನರಿಗೆ ತಿಳಿಸಕೂಡದಂತೆ ಯೇಸು ಯಾವಾಗಲೂ ಆಜ್ಞಾಪಿಸುತ್ತಿದ್ದನು. ಆದರೂ ಜನರು ಆತನ ಬಗ್ಗೆ ಇನ್ನೂ ಹೆಚ್ಚಾಗಿ ಹಬ್ಬಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.
Kannada BSI Bible 2016
ಯಾವ ಮನುಷ್ಯನಿಗೂ ಇದನ್ನು ಹೇಳಬಾರ ದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು; ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟು ಹೆಚ್ಚಾಗಿ ಪ್ರಚಾರ ಮಾಡಿದರು.ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು - ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಹಬ್ಬಿಸಿದರು.
Kannada Bible (KNCL) BSI 2016
ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ಮನುಷ್ಯನಿಗೂ ಇದನ್ನು ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟೂ ಹೆಚ್ಚಾಗಿ ಪ್ರಚಾರಮಾಡಿದರು.