Mark 7:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.
Kannada BSI Bible 2016
ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅತ್ಯಂತಾಶ್ಚರ್ಯಪಟ್ಟು - ಎಲ್ಲಾ ಚೆನ್ನಾಗಿ ಮಾಡಿದ್ದಾನೆ; ಕಿವುಡರಾದರೂ ಕೇಳುವಂತೆ ಮಾಡುತ್ತಾನೆ, ಮೂಕರಾದರೂ ಮಾತಾಡುವಂತೆ ಮಾಡುತ್ತಾನೆ ಅಂದುಕೊಂಡರು.
Kannada Bible (KNCL) BSI 2016
ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಅತ್ಯಂತ ಆಶ್ಚರ್ಯಪಟ್ಟು, “ಯೇಸು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ. ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರೆ,” ಎಂದುಕೊಳ್ಳುತ್ತಿದ್ದರು.