Mark 7:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ನಮ್ಮ ಪಿತೃಗಳ ಸಂಪ್ರದಾಯವನ್ನು ನಿನ್ನ ಶಿಷ್ಯರು ಅನುಸರಿಸದೆ ಅಶುದ್ಧವಾದ ಕೈಗಳಿಂದ ಆಹಾರವನ್ನು ತಿನ್ನುವುದೇಕೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.
Kannada BSI Bible 2016
ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನನ್ನು - ನಿನ್ನ ಶಿಷ್ಯರು ಹಿರಿಯರಿಂದ ಬಂದ ಸಂಪ್ರದಾಯದಂತೆ ಯಾಕೆ ನಡೆದುಕೊಳ್ಳುವದಿಲ್ಲ? ಮೈಲಿಗೆಯ ಕೈಯಿಂದ ಯಾಕೆ ಆಹಾರ ತೆಗೆದುಕೊಳ್ಳುತ್ತಾರೆ ಎಂದು ಕೇಳಿದರು.
Kannada Bible (KNCL) BSI 2016
ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?\ ಎಂದು ಯೇಸುವನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಫರಿಸಾಯರು ಮತ್ತು ನಿಯಮ ಬೋಧಕರು, “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯದ ಪ್ರಕಾರ ಏಕೆ ನಡೆಯುವುದಿಲ್ಲ? ಅವರು ಮೈಲಿಗೆಯಾದ ಕೈಗಳಿಂದ ಊಟಮಾಡುತ್ತಾರಲ್ಲಾ?” ಎಂದು ಯೇಸುವನ್ನು ಕೇಳಿದರು.