Mark 8:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನೊಂದು ಸಮಯದಲ್ಲಿ ಯೇಸುವಿನ ಜೊತೆಯಲ್ಲಿ ಅನೇಕ ಜನರಿದ್ದರು. ಆ ಜನರ ಬಳಿ ಊಟಕ್ಕೆ ಏನೂ ಇರಲಿಲ್ಲ. ಆದ್ದರಿಂದ ಯೇಸು ತನ್ನ ಶಿಷ್ಯರನ್ನು ಕರೆದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು,
Kannada BSI Bible 2016
ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿವಸಗಳಲ್ಲಿ ಜನರು ತಿರಿಗಿ ಗುಂಪುಕೂಡಿ ಬಂದಾಗ ಅವರಿಗೆ ಊಟಕ್ಕೆ ಏನೂ ಇಲ್ಲದೆ ಇರಲು
Kannada Bible (KNCL) BSI 2016
ಜನರು ಪುನಃ ದೊಡ್ಡ ಸಂಖ್ಯೆಯಲ್ಲಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸಗಳಲ್ಲಿ ದೊಡ್ಡ ಜನಸಮೂಹ ಕೂಡಿಬಂದಿತು. ಅವರಿಗೆ ಊಟಕ್ಕೆ ಏನೂ ಇಲ್ಲದ್ದರಿಂದ ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು,