Mark 8:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನನ್ನು ಪರೀಕ್ಷಿಸಲು ಪ್ರಶ್ನೆಗಳನ್ನು ಕೇಳಿದರು. ಅವರು ಯೇಸುವಿಗೆ, “ನೀನು ದೇವರಿಂದ ಬಂದವನೆಂದು ತೋರಿಸಲು ಒಂದು ಸೂಚಕಕಾರ್ಯವನ್ನು ಮಾಡು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
Kannada BSI Bible 2016
ಆಗ ಫರಿಸಾಯರು ಬಂದು ಆತನನ್ನು ಶೋಧಿಸು ವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕ ಕಾರ್ಯವನ್ನು ಮಾಡಬೇಕೆಂದು ಕೇಳಿ ಆತನೊಂದಿಗೆ ತರ್ಕಿಸುವದಕ್ಕೆ ಆರಂಭಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಫರಿಸಾಯರು ಹೊರಟು ಬಂದು ಆತನ ಕೂಡ ತರ್ಕಮಾಡುತ್ತಾ ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳುತ್ತಿರಲು ಆತನು ತನ್ನ ಆತ್ಮದಲ್ಲಿ ನೊಂದು ನಿಟ್ಟುಸುರುಬಿಟ್ಟು -
Kannada Bible (KNCL) BSI 2016
ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ಮಾಡಬೇಕೆಂದು ಕೇಳಿ, ಅವರೊಂದಿಗೆ ತರ್ಕಿಸುವುದಕ್ಕೆ ಆರಂಭಿಸಿದರು.