Mark 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.
Kannada BSI Bible 2016
ಆತನು ತನ್ನ ಆತ್ಮದಲ್ಲಿ ದೀರ್ಘವಾಗಿ ನಿಟ್ಟುಸಿರುಬಿಟ್ಟು--ಈ ಸಂತ ತಿಯು ಸೂಚಕಕಾರ್ಯವನ್ನು ಹುಡುಕುವದು ಯಾಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡು ವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವದು ಯಾಕೆ? ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಸೂಚಕಕಾರ್ಯವು ಸಿಕ್ಕುವದೇ ಇಲ್ಲ ಎಂದು ಹೇಳಿ
Kannada Bible (KNCL) BSI 2016
ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಆತ್ಮದಲ್ಲಿ ನೊಂದುಕೊಂಡು, “ಈ ಸಂತತಿಯು ಸೂಚಕಕಾರ್ಯವನ್ನು ಹುಡುಕುವುದು ಏಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲಾಗುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.