Mark 8:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರು ಇದರ ಅರ್ಥವನ್ನು ಚರ್ಚಿಸಿ, “ನಮ್ಮ ಬಳಿ ರೊಟ್ಟಿ ಇಲ್ಲದೆ ಇರುವುದರಿಂದ ಆತನು ಹೀಗೆ ಹೇಳಿದನು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.
Kannada BSI Bible 2016
ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ನಮ್ಮಲ್ಲಿ ರೊಟ್ಟಿಯಿಲ್ಲವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.
Kannada Bible (KNCL) BSI 2016
ಇದನ್ನು ಕೇಳಿದ ಶಿಷ್ಯರು, “ನಮ್ಮಲ್ಲಿ ರೊಟ್ಟಿಯಿಲ್ಲದ್ದರಿಂದ ಹೀಗೆ ಹೇಳುತ್ತಿರಬಹುದೇ” ಎಂದು ಚರ್ಚಿಸತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮೊಳಗೆ, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು,” ಎಂದು ಚರ್ಚಿಸಿಕೊಂಡರು.