Mark 8:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರು ಇದರ ಬಗ್ಗೆ ಮಾತಾಡುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ರೊಟ್ಟಿ ಇಲ್ಲವೆಂದು ನೀವು ಚರ್ಚಿಸುವುದೇಕೆ? ನಿಮಗಿನ್ನೂ ಕಾಣುವುದಿಲ್ಲವೇ? ನಿಮಗಿನ್ನೂ ಅರ್ಥವಾಗುವುದಿಲ್ಲವೇ? ನಿಮ್ಮ ಹೃದಯಗಳು ಇನ್ನೂ ಕಠಿಣವಾಗಿವೆಯೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?
Kannada BSI Bible 2016
ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅದನ್ನು ತಿಳಿದು - ರೊಟ್ಟಿಯಿಲ್ಲವಲ್ಲಾ ಎಂದು ಮಾತಾಡಿಕೊಳ್ಳುವದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ತಿಳುವಳಿಕೆ ಬರಲಿಲ್ಲವೋ?
Kannada Bible (KNCL) BSI 2016
ಆ ಚರ್ಚೆಯನ್ನು ಯೇಸು ಗಮನಿಸಿ, “ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಏಕೆ ಚರ್ಚಿಸಿಕೊಳ್ಳುತ್ತೀರಿ? ನೀವು ಇನ್ನೂ ಕಾಣದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣ ಮಾಡಿಕೊಂಡಿದ್ದೀರೋ?