Mark 8:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಐದು ಸಾವಿರ ಜನರಿಗಾಗಿ ಐದು ರೊಟ್ಟಿಗಳನ್ನು ಮುರಿದು ನಿಮಗೆ ಕೊಟ್ಟೆ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಹೇಳಿದನು. ಆ ಶಿಷ್ಯರು, “ನಾವು ಹನ್ನೆರಡು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.
Kannada BSI Bible 2016
ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಆ ಐದು ರೊಟ್ಟಿಗಳನ್ನು ಮುರಿದು ಐದುಸಾವಿರ ಜನರಿಗೆ ಹಂಚಿಸಿದಾಗ ತುಂಡು ತುಂಬಿದ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ ಎಂದು ಕೇಳಿದ್ದಕ್ಕೆ ಅವರು - ಹನ್ನೆರಡು ಪುಟ್ಟಿ ಅಂದರು.
Kannada Bible (KNCL) BSI 2016
ನಾನು ಐದು ರೊಟ್ಟಿಗಳಿಂದ ಐದುಸಾವಿರ ಜನರನ್ನು ತೃಪ್ತಿಪಡಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ಒಟ್ಟುಗೂಡಿಸಿದಿರಿ? ನಿಮಗೆ ಜ್ಞಾಪಕವಿಲ್ಲವೇ?” ಎಂದು ಕೇಳಿದರು. “ಹನ್ನೆರಡು ಬುಟ್ಟಿಗಳು” ಎಂದು ಅವರು ಉತ್ತರವಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಬುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಕೂಡಿಸಿದಿರಿ ಎಂದು ನಿಮಗೆ ನೆನಪಿಲ್ಲವೇ?” ಎಂದು ಕೇಳಲು ಅವರು ಯೇಸುವಿಗೆ, “ಹನ್ನೆರಡು ಬುಟ್ಟಿಗಳು,” ಎಂದರು.