Mark 8:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನಾಲ್ಕು ಸಾವಿರ ಜನರಿಗಾಗಿ ಏಳು ರೊಟ್ಟಿಗಳನ್ನು ಮುರಿದು ಕೊಟ್ಟದ್ದನ್ನು ಜ್ಞಾಪಿಸಿಕೊಳ್ಳಿ. ಅವರು ಊಟ ಮಾಡಿದ ಮೇಲೆ ತಿನ್ನಲಾರದೆ ಬಿಟ್ಟ ಚೂರುಗಳನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿದಿರಿ ಎಂಬುದು ನಿಮಗೆ ನೆನಪಿಲ್ಲವೇ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಏಳು ಬುಟ್ಟಿಗಳಲ್ಲಿ ತುಂಬಿದೆವು” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು.
Kannada BSI Bible 2016
ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿಸಿದಾಗ ತುಂಡು ತುಂಬಿದ ಎಷ್ಟು ಹೆಡಿಗೆಗಳನ್ನು ತೆಗೆದುಕೊಂಡು ಹೋದಿರಿ ಎಂದು ಕೇಳಿದ್ದಕ್ಕೆ ಅವರು - ಏಳು ಹೆಡಿಗೆ ಅಂದರು.
Kannada Bible (KNCL) BSI 2016
“ಅಲ್ಲದೆ ನಾನು ಏಳು ರೊಟ್ಟಿಗಳಿಂದ ನಾಲ್ಕು ಸಾವಿರ ಜನರನ್ನು ತೃಪ್ತಿಪಡಿಸಿದಾಗ ಎಷ್ಟು ಕುಕ್ಕೆ ತುಂಬಾ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಿರಿ?” ಎಂದು ಪುನಃ ಅವರನ್ನು ಕೇಳಲು, “ಏಳು ಕುಕ್ಕೆಗಳು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಬುಟ್ಟಿಗಳ ತುಂಬ ತುಂಡುಗಳನ್ನು ಕೂಡಿಸಿದಿರಿ?” ಎಂದು ಕೇಳಲು ಅವರು, “ಏಳು ಬುಟ್ಟಿಗಳು,” ಎಂದರು.