Mark 8:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮತ್ತು ಆತನ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವು ಜನರು ಯೇಸುವಿನ ಬಳಿಗೆ ಒಬ್ಬ ಕುರುಡನನ್ನು ತಂದು ಅವನನ್ನು ಮುಟ್ಟಬೇಕೆಂದು ಯೇಸುವನ್ನು ಬೇಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.
Kannada BSI Bible 2016
ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರಕೊಂಡುಬಂದು - ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.
Kannada Bible (KNCL) BSI 2016
ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಬೇತ್ಸಾಯಿದಕ್ಕೆ ಬಂದಾಗ, ಕೆಲವರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.